alex Certify BIG BREAKING: ಮಂಗಳವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಪ್ಲೀಟ್‌ ಲಾಕ್‌ ಡೌನ್‌ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಂಗಳವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಪ್ಲೀಟ್‌ ಲಾಕ್‌ ಡೌನ್‌

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜುಲೈ 14 ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ ದಿನಾಂಕ ಜುಲೈ 22 ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ.

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ. ಇಂದು ರಾತ್ರಿ 8 ಗಂಟೆಯಿಂದ ಈಗಾಗಲೇ ಘೋಷಿಸಿರುವಂತೆ ಕಂಪ್ಲೀಟ್‌ ಲಾಕ್‌ ಡೌನ್‌ ಜಾರಿಯಾಗುತ್ತಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಇದು ಜಾರಿಯಲ್ಲಿರಲಿದೆ. ಬಳಿಕ ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಒಂದು ವಾರಗಳ ಕಾಲ ಕಂಪ್ಲೀಟ್‌ ಲಾಕ್‌ ಡೌನ್‌ ಇರಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...