alex Certify BIG BREAKING: ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್, ಒಂದೇ ಆಸ್ಪತ್ರೆಯಲ್ಲಿ ಸಿಎಂ, ಮಾಜಿ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್, ಒಂದೇ ಆಸ್ಪತ್ರೆಯಲ್ಲಿ ಸಿಎಂ, ಮಾಜಿ ಸಿಎಂ

ಬೆಂಗಳೂರು: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ತಪಾಸಣೆಗೆ ತೆರಳಿದ್ದ ಸಿದ್ದರಾಮಯ್ಯ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಪಾಸಿಟಿವ್ ವರದಿ ಬಂದಿದೆ.

ತಂದೆಯವರಿಗೆ ನಿನ್ನೆ ಜ್ವರ ಬಂದ ಹಿನ್ನಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಕೊರೋನಾ ಪಾಸಿಟಿವ್ ಬಂದಿದೆ. ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗಬೇಕೆಂದು ಪುತ್ರ ಡಾ. ಯತೀಂದ್ರ ತಿಳಿಸಿದ್ದಾರೆ. ಸ್ವತಃ ಸಿದ್ದರಾಮಯ್ಯ ಕೂಡಾ ಟ್ವೀಟ್‌ ಮಾಡಿ ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...