alex Certify BIG BREAKING: ಮುರುಘಾಶ್ರೀ 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮುರುಘಾಶ್ರೀ 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

Muruga Shri Swamiji : ಮುರುಘಾ ಶ್ರೀಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಕೃತ್ಯದ ಮಾಹಿತಿ ಎಳೆಎಳೆಯಾಗಿ ಬಿಚ್ಚಿಟ್ಟ ಒಡನಾಡಿ ಸಂಸ್ಥೆ - ರಾಜ್ಯ

ಚಿತ್ರದುರ್ಗ; ಲೈಂಗಿಕ ದೌರ್ಜನ್ಯ ಪ್ರಕರಣ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುರುಘಾಶ್ರೀಗಳ ಪೊಲೀಸ್ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಈ ವೇಳೆ ಪೊಲೀಸರು ತಮ್ಮ ವಿಚಾರಣೆ ಮುಗಿದಿದ್ದು, ಆರೋಪಿ ಶ್ರೀಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಅದರಂತೆ ಸೆ.14ರವರೆಗೆ ಮುರುಘಾಶ್ರೀಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾಶ್ರೀಗಳನ್ನು ನಿನ್ನೆ ಮಠಕ್ಕೆ ಕರೆದೊಯ್ದು ಪೊಲೀಸರು ಸ್ಥಳ ಮಹಜರು ಮಾಡಿದ್ದರು. ಈಗಾಗಲೇ ಶ್ರೀಗಳ ವೈದ್ಯಕೀಯ ತಪಾಸಣೆ ಕೂಡ ಮುಗಿದಿದ್ದು, ಸ್ಯಾಂಪಲ್ ನ್ನು ಲ್ಯಾಬ್ ಗೆ ರವಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...