alex Certify BIG BREAKING: ಸಂಕ್ರಾಂತಿ ಹಬ್ಬಕ್ಕೂ ಮುನ್ನವೇ ಭರ್ಜರಿ ಗುಡ್‌ ನ್ಯೂಸ್‌ – ನಾಳೆಯೇ ರಾಜ್ಯಕ್ಕೆ ಬರಲಿದೆ ಕೊರೊನಾ ಲಸಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಂಕ್ರಾಂತಿ ಹಬ್ಬಕ್ಕೂ ಮುನ್ನವೇ ಭರ್ಜರಿ ಗುಡ್‌ ನ್ಯೂಸ್‌ – ನಾಳೆಯೇ ರಾಜ್ಯಕ್ಕೆ ಬರಲಿದೆ ಕೊರೊನಾ ಲಸಿಕೆ

ಕರ್ನಾಟಕಕ್ಕೆ ನಾಳೆಯೇ ಕೊರೊನಾ ಲಸಿಕೆ ಬರಲಿದೆ ಎನ್ನಲಾಗಿದೆ. ಮೊದಲ ಹಂತದಲ್ಲಿ 13 ಲಕ್ಷದ 90 ಸಾವಿರ ಲಸಿಕೆಗಳು ಬರಲಿದ್ದು, ಸೋಮವಾರದಿಂದಲೇ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ಸಚಿವ ಡಾ. ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ‌ ಈ ಮಹತ್ಚದ ವಿಷಯವನ್ನು ತಿಳಿಸಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದಾರೆ. ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಡ್ರೈ ರನ್‌ ನಡೆಸಲಾಗಿದ್ದು, ಹೀಗಾಗಿ ಕೊರೊನಾ ಲಸಿಕೆ ನೀಡಿಕೆ ಕಾರ್ಯ ಯಶಸ್ವಿಯಾಗಲಿದೆ.

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ ಗಳಿಗೆ ಕೊರೊನಾ ಲಸಿಕೆ ನೀಡಲಿದ್ದು, ಈಗಾಗಲೇ ಅವರುಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇವರುಗಳಿಗೆ ಇಂದು ಸಂಜೆ ಅಥವಾ ನಾಳೆಯೊಳಗಾಗಿ ಮೊಬೈಲ್‌ ಮೂಲಕ ಸಂದೇಶ ರವಾನಿಸಲಾಗುತ್ತದೆ ಎಂದು ಹೇಳಲಾಗಿದೆ.

ಲಸಿಕೆ ಸಂಗ್ರಹಕ್ಕೆ, ವಿತರಣೆಗೆ ಈಗಾಗಲೇ ಸಕಲ ಸಿದ್ದತೆಗಳನ್ನು ಕೈಗೊಂಡಿದ್ದು ಲಸಿಕೆ ಲಭ್ಯವಾದ ನಂತರ ಹಂತ ಹಂತವಾಗಿ ಗುರುತಿಸಲಾಗಿರುವ ಕೊರೊನಾ ವಾರಿಯರ್ಸ್‌ ಗಳಿಗೆ ನೀಡಲಾಗುತ್ತದೆ. ಜೊತೆಗೆ ವೃದ್ದರು ಹಾಗೂ ತೀವ್ರತರವಾದ ತೊಂದರೆ ಅನುಭವಿಸುತ್ತಿರುವವರಿಗೂ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...