alex Certify Big Breaking: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ – ಸಿಎಂ ಖಡಕ್‌ ಎಚ್ಚರಿಕೆ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ – ಸಿಎಂ ಖಡಕ್‌ ಎಚ್ಚರಿಕೆ…..!

ರಾಜ್ಯದಲ್ಲಿ ಕೊರೊನಾ ಸ್ಪೋಟವಾಗಿದ್ದು, ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲವಾದ ಕಾರಣ ಒಟ್ಟು 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಇಷ್ಟಾದರೂ ಸಹ ಜನತೆ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿರುವುದು ಕಂಡುಬರುತ್ತಿದೆ. ಹೀಗಾಗಿ ಸರ್ಕಾರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪದೇ ಪದೇ ಸಾರ್ವಜನಿಕರನ್ನು ಎಚ್ಚರಿಸುತ್ತಿದೆ.

 1.68 ಲಕ್ಷ ಹೊಸ ಕೋವಿಡ್ ಕೇಸ್ ಪತ್ತೆ – 3 ರಾಜ್ಯಗಳ ಪರಿಸ್ಥಿತಿ ಅರಿಯಲು ಕೇಂದ್ರ ಆರೋಗ್ಯ ಇಲಾಖೆ ತಜ್ಞರ ಭೇಟಿ

ಇದೀಗ ಲಾಕ್ಡೌನ್ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಮಹತ್ವದ ಹೇಳಿಕೆ ನೀಡಿದ್ದು, ಜನ ಸಹಕರಿಸದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು ಎಂದಿದ್ದಾರೆ. ಬೀದರ್ ನಲ್ಲಿ ಮಾತನಾಡಿರುವ ಅವರು ಈಗಲಾದರೂ ಜನತೆ ಎಚ್ಚೆತ್ತುಕೊಂಡು ಮಾರ್ಗಸೂಚಿ ಅನುಸರಿಸಬೇಕು ಇಲ್ಲದಿದ್ದರೆ ಸರ್ಕಾರದ ಮುಂದೆ ಲಾಕ್ಡೌನ್ ಮಾಡುವ ವಿನಃ ಪರ್ಯಾಯ ಮಾರ್ಗವಿರುವುದಿಲ್ಲ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...