ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐ ಟಿ ತಂಡ ಮೊದಲ ದಿನವೇ ಭೇಟೆ ಆರಂಭಿಸಿದ್ದು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಹಾಗೂ ಓರ್ವ ಯುವತಿ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರಿನ ವಿಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ರೂಂ ಮಾಡಿಕೊಂಡಿದ್ದ ಇಬ್ಬರು ಯುವಕರು ಹಾಗೂ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಓರ್ವ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಯುವತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.