alex Certify BIG NEWS:ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ – ಅಣಕು ಶವಯಾತ್ರೆ ಮಾಡಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS:ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ – ಅಣಕು ಶವಯಾತ್ರೆ ಮಾಡಿ ಆಕ್ರೋಶ

ಬೆಳಗಾವಿ: ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಷಡ್ಯಂತ್ರ ಅಡಗಿದೆ. ಡಿಕೆಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಬೆಳಗಾವಿಯ ಗೋಕಾಕ್ ತಾಲೂಕಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೂ ಡಿ.ಕೆ.ಶಿವಕುಮಾರ್ ಅವರ ಅಣುಕು ಶವಯಾತ್ರೆ ನಡೆಸಿರುವ ರಮೇಶ್ ಬೆಂಬಲಿಗರು, ಕೈಯಲ್ಲಿ ಖಳನಾಯಕ ಡಿ.ಕೆ.ಶಿಗೆ ಶ್ರದ್ಧಾಂಜಲಿ ಎಂಬ ಬ್ಯಾನರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ – ಮ್ಯಾಜಿಸ್ಟ್ರೇಟ್ ಮುಂದೆ ಯುವತಿ ನೀಡುವ ಹೇಳಿಕೆಯತ್ತ ಎಲ್ಲರ ಚಿತ್ತ

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಕೀಯಕ್ಕಾಗಿ ಓರ್ವ ಹೆಣ್ಣುಮಗಳನ್ನು ಇಟ್ಟುಕೊಂಡು ಡಿ.ಕೆ.ಶಿವಕುಮಾರ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿದ್ದಾರೆ. ತಕ್ಷಣ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸರ್ಕಾರ ಡಿಕೆಶಿ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ನಡುವೆ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರಕ್ಕಾಗಿ ಇಂದು ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಪ್ರತಿಭಟನೆಗಳು ಇನ್ನಷ್ಟು ಹೆಚ್ಚುವ ಸಾಧ್ಯತೆ ದಟ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...