alex Certify
ಕನ್ನಡ ದುನಿಯಾ       Mobile App
       

Kannada Duniya

BIG NEWS: ಶಾಲೆ ಆರಂಭದ ಕುರಿತು ಮುಂದಿನ ವಾರದೊಳಗೆ ತೀರ್ಮಾನ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ನಿಗದಿಯಾಗಿದ್ದ ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದವಲ್ಲದೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಆದರೆ ಬಹಳಷ್ಟು ಸಡಿಲಿಕೆಗಳನ್ನು ಮಾಡಲಾಗಿದೆ.

ಈ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ, ಈಗಾಗಲೇ ಹತ್ತನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದೆ. ಇದರ ಜೊತೆಗೆ ಶಾಲಾ – ಕಾಲೇಜುಗಳನ್ನೂ ಆರಂಭಿಸಲು ಚಿಂತನೆ ನಡೆಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಾಲೆಗಳ ಆರಂಭಕ್ಕೆ ಪೋಷಕರು ಅಪಸ್ವರ ಎತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಶಾಲೆ ಆರಂಭದ ಕುರಿತು ಮುಂದಿನ ವಾರದೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...