ತುಮಕೂರು: ಸಹೋದರ ಕೊರೊನಾ ಸೋಂಕಿಗೆ ಬಲಿಯಾದ ಸುದ್ದಿ ತಿಳಿಯುತ್ತಿದ್ದಂತೆ ಮನನೊಂದ ಸಹೋದರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕುಣಿಗಲ್ ಮೂಲದ ಕುಮಾರ್ (27) ತುಮಕೂರಿನ ಶ್ರಿದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕುಮಾರ್ ಮೃತಪಟ್ಟಿದ್ದಾರೆ. ಕೋವಿಡ್ ಗೆ ಅಣ್ಣ ಬಲಿಯಾದ ಸುದ್ದಿ ತಿಳಿಯುತ್ತಿದ್ದಂತೆ ಕುಮಾರ್ ತಂಗಿ ಶ್ರೀದೇವಿ ಕಾಲೇಜು ಆಸ್ಪತ್ರೆ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಯುವತಿಗೆ ಶ್ರೀದೇವಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈ ಬಗ್ಗೆ ಮೆಡಿಕಲ್ ಕಾಲೇಜು ಖಚಿತವಾಗಿ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ.