ಮೈಸೂರು: 2016ರಲ್ಲಿ ಉದಯಗಿರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ನದೀಮ್ ಪಾಷಾ, ತನ್ವೀರ್ ಪಾಷಾ, ಸದ್ದಾಂ ಹುಸೇನ್ ಅಪರಾಧಿಗಳು. ಘಟನೆ ನಡೆದ 5 ವರ್ಷದ ಬಳಿಕ ಅಪರಾಧಿಗಳಿಗೆ ಜೈಲುಶಿಕ್ಷೆ ವಿಧಿಸಲಾಗಿದ್ದು, ತಲಾ 50,000 ರೂಪಾಯಿ ದಂಡ ವಿಧಿಸಲಾಗಿದೆ.
ನೃತ್ಯದ ಮೂಲಕ ನೆಟ್ಟಿಗರ ಮನ ಗೆದ್ದ ಆಟೋ ಚಾಲಕ
ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೋಕ್ಸೋ ಹಾಗೂ ಕೊಲೆ ಬೆದರಿಕೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇನ್ನು ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.