ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ 22 ರೋಗಿಗಳ ದುರಂತ ಅಂತ್ಯಕ್ಕೆ ಚಾಮರಾಜನಗರ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ. ಆಕ್ಸಿಜನ್ ಕೊರತೆ ಬಗ್ಗೆ ಮಾಹಿತಿ ಇದ್ದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎನ್ನಲಾಗಿದೆ.
ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಚಾಮರಾಜನಗರ ಡಿ.ಸಿ. ಎಂ.ಆರ್. ರವಿ, ಆಕ್ಸಿಜನ್ ಸಮಸ್ಯೆಯಿಂದಲೇ ಎಲ್ಲಾ ರೋಗಿಗಳು ಸಾವನ್ನಪ್ಪಿಲ್ಲ. ಬೇರೆ ಸಮಸ್ಯೆಗಳಿಂದಲೂ ರೋಗಿಗಳು ಸಾವನ್ನಪ್ಪಿದ್ದಾರೆ. ನಮಗೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗಬೇಕಿತ್ತು. ಆದರೆ ಆಕ್ಸಿಜನ್ ಬಂದಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಜಿಲ್ಲಾಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಆಕ್ಸಿಜನ್ ಇರಲಿಲ್ಲ. ಈ ಬಗ್ಗೆ ಎರಡು ದಿನಗಳ ಹಿಂದೆಯೇ ಆಸ್ಪತ್ರೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿತ್ತು. ಆದರೂ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸದೇ ಯಾವುದೇ ಸಿದ್ಧತೆ ನಡೆಸದೇ ನಿರ್ಲಕ್ಷ್ಯ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಜಿಲ್ಲಾಡಳಿತದ ನಿಲರ್ಕ್ಷ್ಯಕ್ಕೆ 24 ಗಂಟೆಯಲ್ಲಿ 22 ರೋಗಿಗಳು ಸಾವನ್ನಪ್ಪಿದ್ದಾರೆ.