ಬೆಂಗಳೂರು: ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ನೀಡಿಕೆಯಲ್ಲೂ ರಾಜ್ಯ ಸರ್ಕಾರ ತಾರತಮ್ಯವೆಸಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಆರ್. ಧ್ರುವನಾರಾಯಣ್, ಆಕ್ಸಿಜನ್ ದುರಂತದಲ್ಲಿ ಒಟ್ಟು 36 ಜನರು ಮೃತಪಟ್ಟಿದ್ದಾರೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ತಜ್ಞರ ಸಮಿತಿ ವರದಿ ನೀಡಿದೆ. ಆದಾಗ್ಯೂ ಕೂಡ ರಾಜ್ಯ ಸರ್ಕಾರ 24 ಜನರ ಕುಟುಂಬಕ್ಕೆ ಮಾತ್ರ ತಲಾ 2 ಲಕ್ಷದಂತೆ ಪರಿಹಾರ ಬಿಡುಗಡೆ ಮಾಡಿದೆ. ಉಳಿದ 12 ಕುಟುಂಬಗಳಿಗೆ ಯಾವುದೇ ಪರಿಹಾರ ನೀಡದೇ ತಾರತಮ್ಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಡಕ್ಕಪ್ಪಳಿಸಿದ ಬೋಟ್; ಅಪಾಯದಿಂದ ಪಾರಾದ 10 ಮೀನುಗಾರರು
ರಾಜ್ಯ ಸರ್ಕಾರ ಈ ರೀತಿ ಸಾವಿನಲ್ಲೂ ತಾರತಮ್ಯ ಮಾಡುವ ಕ್ರಮವನ್ನು ಬಿಡಬೇಕು. ಸರ್ಕಾರದ ಈ ನಡೆ ಸರಿಯಲ್ಲ. ಉಳಿದ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೇ 2ರಂದು ಆಕ್ಸಿಜನ್ ಕೊರತೆಯಿಂದ 24 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದರು. ಪ್ರಕರಣದ ವರದಿಗೆ ನೇಮಕಗೊಂಡಿದ್ದ ತಜ್ಞರ ಸಮಿತಿ, ಆಕ್ಸಿಜನ್ ಕೊರತೆಯಿಂದ ಮೃತರಾದವರ ಸಂಖ್ಯೆ 24 ಅಲ್ಲ, 36 ಜನರು ಸಾವನ್ನಪ್ಪಿದ್ದರು ಎಂದು ವರದಿ ನೀಡಿತ್ತು.