ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆಲ್ ಲೈನ್ ಪರೀಕ್ಷೆಗಳನ್ನು ನಡೆಸಬೇಕು ಎಂಬ ಒತ್ತಾಯಗಳು ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಅಶ್ವತ್ಥ ನಾರಾಯಣ, ನಮ್ಮಲ್ಲಿ ಆನ್ ಲೈನ್ ಪರೀಕ್ಷೆಗಳಿಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೆಲವೊಂದು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಆನ್ ಲೈನ್ ಪರೀಕ್ಷೆಗಳು ನಡೆಯುತ್ತಿವೆ. ಅಂತೆಯೇ ಎಲ್ಲರಿಗೂ ಆನ್ ಲೈನ್ ಪರೀಕ್ಷೆ ನಡೆಸುವಂತೆ ಪೋಷಕರು ಒತ್ತಾಯಿಸಿದ್ದರು. ಆದರೆ ಆನ್ ಲೈನ್ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಕೋವಿಡ್ ಎಂಬ ಬೇವಿಗೆ ಲಸಿಕೆ ಎಂಬ ಬೆಲ್ಲ ಪಡೆಯಿರಿ: ಸಚಿವ ಸುಧಾಕರ್ ಕರೆ
ಪ್ರಸ್ತುತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಬಂದ ಬಳಿಕ ಆಫ್ ಲೈನ್ ತರಗತಿಗಳು ಆರಂಭವಾಗಲಿದೆ. ವಿದ್ಯಾರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಯಾವುದೇ ತರಗತಿಗಳಿಗೆ ಹಾಜರಾಗಬಹುದು. ಆದರೆ ಹಾಜರಾತಿ ಕಡ್ಡಾಯ ಎಂದರು.