ಇಂದು ಮಧ್ಯಾಹ್ನ ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು.
ಝಿರೋ ಟ್ರಾಫಿಕ್ ನಲ್ಲಿ ಸದಾನಂದ ಗೌಡರನ್ನು ಕರೆದೊಯ್ದು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲೇ ಸಂಪೂರ್ಣ ಚೇತರಿಸಿಕೊಂಡಿದ್ದ ಅವರನ್ನು ಹೆಚ್ಚಿನ ತಪಾಸಣೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಅವರ ಆರೋಗ್ಯ ಪರಿಸ್ಥಿತಿ ಕುರಿತು ಬೆಂಗಳೂರಿನ ವೈದ್ಯರು ಮಾಹಿತಿ ನೀಡಿದ್ದು, ಅವರು ಸಂಪೂರ್ಣವಾಗಿ ಆರೋಗ್ಯದಿಂದಿದ್ದಾರೆ ಎಂದು ತಿಳಿಸಿದ್ದಾರೆ. ಸದಾನಂದ ಗೌಡರು ಸಹ ಈ ಕುರಿತು ಟ್ವೀಟ್ ಮಾಡಿದ್ದು, ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.