alex Certify BIG NEWS: ಆಸ್ಪತ್ರೆಗಳಿಗೆ ಬರಬೇಡಿ ಮನೆಯಲ್ಲೇ ಐಸೋಲೇಟ್ ಆಗಿ ಎಂದ ಆರೋಗ್ಯ ಸಚಿವ ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಸ್ಪತ್ರೆಗಳಿಗೆ ಬರಬೇಡಿ ಮನೆಯಲ್ಲೇ ಐಸೋಲೇಟ್ ಆಗಿ ಎಂದ ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ಕೊರೊನಾ ಸೋಂಕಿನ ಅಬ್ಬರ ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಈಗ ಕೊರೊನಾ 2ನೇ ಅಲೆ ಮಾತ್ರ ಇದೆ. ಇದು ಇನ್ನೂ 30-40 ದಿನಗಳ ವರೆಗೆ ಇರುತ್ತದೆ. ಆದರೆ ಬೇರೆ ದೇಶಗಳಲ್ಲಿ 3 ಮತ್ತು 4ನೇ ಅಲೆ ಕೂಡ ಆರಂಭವಾಗಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಪಾಸಿಟಿವ್ ಎಂದಾಕ್ಷಣ ಭಯಪಡುವ ಅಗತ್ಯವಿಲ್ಲ. ಇದೊಂದು ಸಾಮಾನ್ಯ ಜ್ವರ, ನೆಗಡಿಯಂತಹ ವೈರಸ್. ಪಾಸಿಟಿವ್ ಎಂದಾಕ್ಷಣ ಭಯಗೊಂಡು ಆಸ್ಪತ್ರೆಗಳಿಗೆ ದಾಖಲಾಗುವ ಅಗತ್ಯವಿಲ್ಲ. ಅನಗತ್ಯವಾಗಿ ಆಸ್ಪತ್ರೆಗೆ ಬರುವುದರಿಂದ ಅಗತ್ಯವಿರುವ ಸೋಂಕಿತರಿಗೂ ಬೆಡ್, ಆಕ್ಸಿಜನ್ ಸಿಗದೆ ಸಾಯುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.

 24 ಗಂಟೆಯಲ್ಲಿ 3,52,991 ಜನರಲ್ಲಿ ಕೊರೊನಾ ಸೋಂಕು ದೃಢ; 2,812 ಮಂದಿ ಸಾವು

ರಾಜ್ಯದಲ್ಲಿ ಆಕ್ಸಿಜನ್ ಕೊರತೆಯುಂಟಾಗುತ್ತಿದೆ. ಇದನ್ನು ಶೀಘ್ರದಲ್ಲಿ ಸರಿಪಡಿಸಲಾಗುವುದು. ಸೋಂಕಿನ ಲಕ್ಷಣ ಕಂಡು ಬಂದಾಕ್ಷಣ ಆಸ್ಪತ್ರೆಗೆ ಬರಬೇಡಿ. ಮನೆಯಲ್ಲಿಯೇ ಐಸೋಲೇಟ್ ಆಗಿ, ಟೆಲಿಕಾಲಿಂಗ್ ಮೂಲಕ ವೈದ್ಯರನ್ನು ಸಂಪರ್ಕಿಸಿ ಅವರಿಂದ ಔಷಧ ಹಾಗೂ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುವುದು ಹೇಗೆ ಎಂಬ ಬಗ್ಗೆ ಮಾಹಿತಿ ಪಡೆಯಿರಿ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...