ಮೈಸೂರು: ಅಧಿವೇಶನಕ್ಕೆ ಹೋಗಲು ಬೇಸರವಾಗುತ್ತೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದನ್ನು ಬಿಟ್ಟು ಅನಗತ್ಯ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆಯಾಗಬೇಕು ಆದರೆ ಇವೆಲ್ಲದಕ್ಕಿಂತ ಹೆಚ್ಚಾಗಿ ಅನಗತ್ಯ ವಿಷಯಗಳ ಚರ್ಚೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಸದನಲ್ಲಿ ಪಾಲ್ಗೊಳ್ಳಲು ಬೇಸರವಾಗುತ್ತದೆ ಎಂದರು.
ಸಚಿವ ಸುಧಾಕರ್ ಮನೆ ಎದುರು ಮಾರಾಮಾರಿ –ಡ್ರೈವರ್, ಗನ್ ಮ್ಯಾನ್ ಹೊಡೆದಾಟ
ಇದೇ ವೇಳೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಮಹಾನಾಯಕನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಸಿಡಿ ಹಿಂದಿನ ಮಹಾನಾಯಕ ಯಾರು? ಅಂತಹ ಮನೆ ಹಾಳು, ಮನೆ ಮುರಕ ಕೆಲಸ ಮಾಡಿದವರಾರು? ಯಾಕೆ ಇಂಥಹ ಕೆಲಸ ಮಾಡಿದರೆಂಬ ಬಗ್ಗೆ ತಿಳಿದುಕೊಳ್ಳಲು ನನಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಕುತೂಹಲವಿದೆ. ಎಸ್ಐಟಿ ಅದಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹೀಗಾಗಿ ಶೀಘ್ರದಲ್ಲಿ ಆ ಮಹಾನಾಯಕನ ಬಗ್ಗೆ ಗೊತ್ತಾಗಲಿದೆ ಎಂದು ಹೇಳಿದರು.