ಬೆಂಗಳೂರು: ಒಂದೆಡೆ ಖಾಸಗಿ ಶಾಲೆಗಳ ಶುಲ್ಕ ವಿರೋಧಿಸಿ ಪೋಷಕರು ಪ್ರತಿಭಟನೆ ನಡೆಸಿದ್ದರೆ, ಇನ್ನೊಂದೆಡೆ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಸಮರ ಸಾರಿವೆ. ಖಾಸಗಿ ಶಾಲೆಗಳು ಆನ್ ಲೈನ್ ಕ್ಲಾಸ್ ಗಳನ್ನು ಸ್ಥಗಿತಗೊಳಿಸಿ ಹೋರಾಟದ ಹಾದಿ ಹಿಡಿದಿದ್ದು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.
ಖಾಸಗಿ ಶಾಲಾ ಶಿಕ್ಷಕರಿಗೆ ಆರ್ಥಿಕ ಪ್ಯಾಕೇಜ್, ಕಟ್ಟಡ ಸುರಕ್ಷತೆ, ಆರ್ ಟಿ ಇ ಹಣ ಪಾವತಿ ಸೇರಿದಂತೆ 15ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಇಂದಿನಿಂದ ಆನ್ ಲೈನ್ ಕ್ಲಾಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದೆ.
ಹಲವು ಬಾರಿ ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಸೆಳೆದರೂ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ ಈ ಹಿನ್ನೆಲೆಯಲ್ಲಿ ಇಂದಿನಿಂದ ಆನ್ ಲೈನ್ ಕ್ಲಾಸ್ ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ನ್ಯಾಯಾಲಯದ ಮೊರೆ ಹೋಗುವುದಾಗಿ ರುಪ್ಸಾ ತಿಳಿಸಿದೆ.