ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಲಾಗಿದ್ದ ಶಾಲೆಗಳು ಇಂದಿನಿಂದ ಬಾಗಿಲು ತೆರೆಯಲಿವೆ. ಶಾಲೆಗಳು ತೆರೆದರೂ ವಿದ್ಯಾರ್ಥಿಗಳು ಬರುವುದಿಲ್ಲ. ಬದಲಾಗಿ ಶಿಕ್ಷಕರು ಮತ್ತು ಸಿಬ್ಬಂದಿ ಶಾಲೆಗಳಲ್ಲಿ ಹಾಜರಿರುತ್ತಾರೆ.
ಪೂರ್ವ ಸಿದ್ಧತೆ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಜೂನ್ 5ರಿಂದ ತೆರೆಯುವಂತೆ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಶಿಕ್ಷಕರು ಮತ್ತು ಸಿಬ್ಬಂದಿಗಳು ಮಾತ್ರ ಶಾಲೆಗೆ ಬರಲಿದ್ದಾರೆ.
ಮುಂದಿನ ದಿನಗಳಲ್ಲಿ ಶಾಲೆ ಆರಂಭಿಸುವ ಕುರಿತು ಶಿಕ್ಷಕರು, ಪೋಷಕರೊಂದಿಗೆ ಚರ್ಚೆ ನಡೆಸುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಲೆ ತೆರೆದರೆ ಯಾವ ಯಾವ ಕ್ರಮಗಳನ್ನು ಅನುಸರಿಸಬೇಕು. ಪಾಳಿಯ ಮೇಲೆ ಶಾಲೆ ನಡೆಸಬೇಕೇ ಎಂಬೆಲ್ಲ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಗುತ್ತದೆ.