ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದರ ಉಪಟಳ ಮೇರೆ ಮೀರಿದೆ. ಬೆಂಗಳೂರು ನಗರ, ಮೈಸೂರು, ಉಡುಪಿ, ಮಣಿಪಾಲ್, ಮಂಗಳೂರು, ಬೀದರ್, ಕಲಬುರಗಿ ಹಾಗೂ ತುಮಕೂರಿನಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.
ಹೀಗಾಗಿ ಈ 8 ನಗರಗಳಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಇದು ಜಾರಿಯಲ್ಲಿರಲಿದೆ. ಏಪ್ರಿಲ್ 20ರ ವರೆಗೆ ನೈಟ್ ಕರ್ಫ್ಯೂ ಮುಂದುವರಿಯಲಿದ್ದು, ಒಂದೊಮ್ಮೆ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಇದು ಮತ್ತಷ್ಟು ದಿನ ಮುಂದುವರಿಸುವ ಚಿಂತನೆಯಲ್ಲಿ ಸರ್ಕಾರವಿದೆ.
ಫಲಿತಾಂಶಕ್ಕೆ ಮುನ್ನವೇ ಶುರುವಾಯಿತು ‘ರೆಸಾರ್ಟ್’ ಪಾಲಿಟಿಕ್ಸ್
ನೈಟ್ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳು ಸ್ತಬ್ಧವಾಗಲಿದ್ದು, ಬಸ್, ರೈಲು, ವಿಮಾನ ಸಂಚಾರ ಎಂದಿನಂತೆ ಇರುವ ಕಾರಣ ಪ್ರಯಾಣಿಕರಿಗೆ ಅನುಕೂಲವಾಗುವ ಸಲುವಾಗಿ ಕ್ಯಾಬ್, ಓಲಾ, ಉಬರ್ ಗಳಿಗೆ ಅವಕಾಶ ಕಲ್ಪಿಸಲಾಗಿದೆ.