ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರ, ರಾಜ್ಯಗಳಿಗೆ ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. ಕೆಲ ಜಿಲ್ಲೆಗಳ ವರದಿ ಬರಬೇಕಿದೆ. ಎಲ್ಲವನ್ನು ಅವಲೋಕಿಸಿ ಮತ್ತೊಮ್ಮೆ ಅಧಿಕಾರಿಗಳು, ಸಚಿವರ ಸಭೆ ನಡೆಸಿ ನಿರ್ಧರಿಸುತ್ತೇವೆ ಎಂದರು.
ಜೂನ್ 5 ಹಾಗೂ 6 ರ ವರೆಗೂ ಪರಿಸ್ಥಿತಿ ನೋಡುತ್ತೇವೆ. ಬಳಿಕ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ. ಇನ್ನು ಎರಡನೇ ಹಂತದ ಪ್ಯಾಕೇಜ್ ಬಗ್ಗೆಯೂ ಸಿದ್ಧತೆ ನಡೆಸಲಾಗಿದೆ. 2-3 ದಿನಗಳಲ್ಲಿ ಘೋಷಣೆಯಾಗಲಿದೆ ಎಂದು ಹೇಳಿದರು.