ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ನೆಪಗಳನ್ನು ಹೇಳಿ ಎಸ್ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸುತ್ತಿದೆ.
ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಬಂದಿರುವುದಾಗಿ ಸಚಿವ ಭೈರತಿ ಬಸವರಾಜ್ ಹೇಳಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಟಾಂಗ್ ನೀಡಿರುವ ಕಾಂಗ್ರೆಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ಇವತ್ತು ಕೊರೊನಾ ಇದೆ ಎಂದು ಹೇಳುತ್ತಿದ್ದಾರೆ. ನಾಳೆ ……ಡ್ಸ್!!!.. ಭೈರತಿ ಬಸವರಾಜ್ ಎಂದು ಟಾಂಗ್ ನೀಡಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು…..?
ರಮೇಶ್ ಜಾರಕಿಹೊಳಿ ಇಂದು ಕೊರೊನಾ ಇದೆ ಎಂದು ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದಾರೆ. ನಾಳೆ ಬೇರೆ ಇನ್ನೇನು ಕಾಯಿಲೆ ಬಗ್ಗೆ ಕಾರಣ ಹೇಳುತ್ತಾರೋ ಎಂದು ಟೀಕಿಸಿದ್ದಾರೆ.