ಬೆಳಗಾವಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದಿದ್ದ ಎರಡು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ, ಒಂದು ಕ್ಷೇತ್ರದ ಲೋಕಸಭಾ ಉಪಚುನಾವಣೆ ಹಾಗೂ ನಗರ ಪಾಲಿಕೆ ಉಪಚುನಾವಣೆಗಳ ಬಳಿಕ ಕೊರೊನಾ ಸೋಂಕಿನಿಂದ ಮೃತಪಡುತ್ತಿರುವ ಶಿಕ್ಷಕರ ಸಂಖ್ಯೆ ಹೆಚ್ಚುತ್ತಿದೆ. ಉಪ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ ಇದೀಗ ಕೋವಿಡ್ ಗೆ ಬಲಿಯಾಗಿದ್ದಾರೆ.
24 ಗಂಟೆಯಲ್ಲಿ 2,40,842 ಜನರಲ್ಲಿ ಕೊರೊನಾ ಸೋಂಕು; 3,741 ಮಂದಿ ಮಹಾಮಾರಿಗೆ ಬಲಿ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…?
ರಾಜಶೇಖರ ತಳವಾರ (56) ಮೃತ ಶಿಕ್ಷಕ. ಇವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಲ್ಲೊಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದರು. ಬೈ ಎಲೆಕ್ಷನ್ ಕರ್ತವ್ಯಕ್ಕೆ ಹಾಜರಾಗಿದ್ದರು. ಕೆಲ ದಿನಗಳ ಹಿಂದೆ ರಾಜಶೇಖರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ರಾಜಶೇಖರ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.