alex Certify BIG NEWS: ಉಪ ಚುನಾವಣೆಯಲ್ಲಿ ಕಣಕ್ಕಿಳಿಯದಿರಲು ಜೆಡಿಎಸ್ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪ ಚುನಾವಣೆಯಲ್ಲಿ ಕಣಕ್ಕಿಳಿಯದಿರಲು ಜೆಡಿಎಸ್ ನಿರ್ಧಾರ

ಇತ್ತೀಚೆಗೆ ನಡೆದ ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪರಾಭವಗೊಂಡಿದ್ದು, ಅದರಲ್ಲೂ ಜೆಡಿಎಸ್ ಭದ್ರಕೋಟೆಯಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಸ್ಥಾನ ಸಿಕ್ಕಿತ್ತು.

ಸದ್ಯದಲ್ಲೇ ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ವಿಧಾನಸಭಾ ಉಪ ಚುನಾವಣೆ ನಡೆಯಲಿದ್ದು, ಆದರೆ ಈ ಚುನಾವಣೆಯಲ್ಲಿ ಕಣಕ್ಕಿಳಿಯದಿರಲು ಜೆಡಿಎಸ್ ನಿರ್ಧರಿಸಿದೆ ಎಂದು ಹೇಳಲಾಗಿದೆ. ಹೀಗಾಗಿ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.

ವಿಧಾನಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ನಮಗೆ ಮುಂಬರುವ ಸಾರ್ವತ್ರಿಕ ಚುನಾವಣೆ ಮುಖ್ಯವಾಗಿದೆ. ಹೀಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ವ್ಯರ್ಥ ಎಂಬ ನಿರ್ಧಾರಕ್ಕೆ ಬಂದಿದ್ದೇವೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...