ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಮತ್ತೆ ಲಾಕ್ ಡೌನ್ ಜಾರಿ ಬಗ್ಗೆ ಚರ್ಚೆ ನಡೆದಿದ್ದು, ದಿನಕ್ಕೊಂದು ಸುದ್ದಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಊಹಾಪೋಹದ ಸುದ್ದಿಗಳಿಗೆ ಜನರು ಕಿವಿಗೊಡಬೇಡಿ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಧ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ. ಲಾಕ್ ಡೌನ್ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಲಾಕ್ ಡೌನ್ ಇಲ್ಲದೆಯೇ ಕೊರೊನಾ ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ. ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹರಡಿ ಜನರಲ್ಲಿ ಆತಂಕವನ್ನುಂಟು ಮಾಡುವುದು ಬೇಡ. ಊಹಾಪೋಹದ ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪಿಎಫ್ ಖಾತೆ ಹೊಂದಿರುವವರು ಸುಲಭವಾಗಿ UAN ಸಂಖ್ಯೆ ಪಡೆಯಲು ಇಲ್ಲಿದೆ ಮಾಹಿತಿ
ಉಪಚುನಾವಣೆ ಮುಗಿದ ಬಳಿಕ ಸಿಎಂ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ವೇಳೆ ಚರ್ಚಿಸಿ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.