alex Certify BIG NEWS: ಏರ್ ಪೋರ್ಟ್ ನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ- ಚಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏರ್ ಪೋರ್ಟ್ ನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ- ಚಾಲಕ ಸಾವು

ಬೆಂಗಳೂರು: ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಟ್ಯಾಕ್ಸಿ ಚಾಲಕನೊಬ್ಬ ಮನನೊಂದು ಏರ್ ಪೋರ್ಟ್ ನಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಕೊರೊನಾ ಲಾಕ್ ಡೌನ್ ಬಳಿಕ ದಿನಕ್ಕೆ 300 ರೂಪಾಯಿ ಸಂಪಾದನೆ ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕೂಡ ಅಸಾಧ್ಯವಾಗಿತ್ತು. ತೀವ್ರವಾಗಿ ಮನನೊಂದ ಚಾಲಕ ಏರ್ ಪೋರ್ಟ್ ಪಿಕ್ ಅಪ್ ಪಾಯಿಂಟ್ ನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣ ಆತನನ್ನು ತಡೆದ ಏರ್ ಪೋರ್ಟ್ ಸಿಬ್ಬದಿಗಳು ಆಸ್ಪತ್ರೆಗೆ ದಾಖಲಿಸಿದ್ದರು.

ಸಲುಗೆಯಿಂದಿದ್ದ ಪತ್ನಿ ಅಕ್ಕನ ಮನೆಗೆ ಬಂದ ಬಾವನಿಂದ ಘೋರ ಕೃತ್ಯ

ದೇಹದ ಶೇ.70ರಷ್ಟು ಭಾಗ ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇದೀಗ ಚಾಲಕ ಸಾವನ್ನಪ್ಪಿದ್ದಾನೆ. ಮೃತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಪ್ರತಾಪ್ ಕಳೆದ 10 ವರ್ಷಗಳಿಂದ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್ ಪೋರ್ಟ್ ನ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...