ತುಮಕೂರು: ತುಮಕೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಇದೀಗ ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಬಲಿಯಾಗಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.
ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ ಒಪ್ಪದ ಅರ್ಚಕನನ್ನೇ ಹಿಡಿದು ಥಳಿಸಿದ ಭಕ್ತರು
ತುಮಕೂರಿನ ಕುಣಿಗಲ್ ತಾಲೂಕಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೋವಿಡ್ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಜ್ಜಯನಿ ಪ್ರೌಢ ಶಾಲೆಯ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯ ಪ್ರೌಢ ಶಾಲೆಯ ಪರಮೇಶ್ವರ್ ಆಚಾರ್, ತುರುಗೂರು ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಕೊರೊನ ಸೋಂಕಿನಿಂದ ಮೃತಪಟ್ಟಿದ್ದಾರೆ.