ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಉಭಯ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಪ್ರತಿದಿನ 400 ಬಸ್ ಗಳು ಸಂಚರಿಸುತ್ತಿದ್ದರೆ, ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು.
ಸಿಲಿಂಡರ್ ʼಸಬ್ಸಿಡಿʼ ಮಾಹಿತಿ ತಿಳಿಯೋದು ಹೇಗೆ…? ಇಲ್ಲಿದೆ ನೋಡಿ ಸಂಪೂರ್ಣ ವಿವರ
ಶಿವಸೇನೆ ಕಾರ್ಯಕರ್ತರು ಕೊಲ್ಹಾಪುರದಲ್ಲಿ ಕನ್ನಡ ನಾಮಫಕಗಳಿಗೆ ಮಸಿ ಬಳಿದು, ಅಂಗಡಿ, ಮುಂಗಟ್ಟುಗಳ ಮಾಲೀಕರಿಗೆ ಕನ್ನಡ ನಾಮಫಲಕ ಹಾಕಿದರೆ ವ್ಯಾಪಾರ ನಡೆಸಲು ಅವಕಾಶ ನಿಡುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದರು. ಇದರ ಬೆನ್ನಲ್ಲೇ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಶಿವಸೇನೆ ಕಚೇರಿ ಮೇಲೆ ದಾಳಿ ನಡೆಸಿದ್ದರಲ್ಲದೇ ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ಕರವೇ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದ್ದು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಕೊಲ್ಹಾಪುರ ಹಾಗೂ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.