ಧಾರವಾಡ: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ನಾಳೆಯಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿಕೊಂಡು ಪ್ರಕಟಿಸುವುದಾಗಿ ವಿವಿ ಕುಲಪತಿ ಕೆ.ಬಿ.ಗುಡಸಿ ತಿಳಿಸಿದ್ದಾರೆ.
ಏಪ್ರಿಲ್ 15, 16 ಹಾಗೂ 17ರಂದು ಕರ್ನಾಟಕ ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ನಡೆಯಬೇಕಿದ್ದವು. ಆದರೆ ಸಾರಿಗೆ ಮುಷ್ಕರದಿಂದಾಗಿ ಸಮರ್ಪಕವಾದ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯುವು ಕಷ್ಟಕರವಾಗಿದೆ ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿದ್ದಾಗಿ ತಿಳಿಸಲಾಗಿದೆ.