ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣಾ ಅಖಾಡ ರಣಕಣವಾಗಿ ಮಾರ್ಪಡುತ್ತಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಯಮಕನಮರಡಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿಯಲ್ಲಿ ಕೈ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಾದ ಕಿರಣ್ ರಜಪೂತ, ಭರಮಾ ಧೂಪದಾಳೆ ಮೇಲೆ ದಾಳಿ ನಡೆಸಲಾಗಿದ್ದು, ಭರಮಾ ಧೂಪದಾಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಸ್ಕ್ ಧರಿಸಿಕೊಂಡು ಬಂದಿದ್ದ ಅಪರಿಚಿತರು 7 ಅಡಿ ದೂರದಿಂದ ಫೈರಿಂಗ್ ಮಾಡಿದ್ದಾರೆ. ಗಾಯಾಳು ಧೂಪದಾಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಹಳೇ ಮೈಷಮ್ಯದಿಂದ ಈ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಯಮಕನಮರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.