alex Certify BIG NEWS: ಕಾಂಗ್ರೆಸ್ ವಿರೋಧದ ನಡುವೆಯೇ ಬಜೆಟ್ ಮಂಡನೆ; ಕೈ ಸದಸ್ಯರ ಸಭಾತ್ಯಾಗ; ಬಿಜೆಪಿಯಿಂದ ಜೈ ಶ್ರೀರಾಮ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ವಿರೋಧದ ನಡುವೆಯೇ ಬಜೆಟ್ ಮಂಡನೆ; ಕೈ ಸದಸ್ಯರ ಸಭಾತ್ಯಾಗ; ಬಿಜೆಪಿಯಿಂದ ಜೈ ಶ್ರೀರಾಮ್ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಜೆಟ್ ಓದಲು ಆರಂಭಿಸುತ್ತಿದ್ದಂತೆಯೇ ಎದ್ದು ನಿಂತ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸುವ ನೈತಿಕತೆ ಇಲ್ಲ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತದೆ ಎಂದರು. ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ದ್ವನಿಗೂಡಿಸಿದರು. ಸದನದಲ್ಲಿ ಗದ್ದಲ-ಕೋಲಾಹಲ ಆರಂಭವಾಯಿತು. ಈ ನಡುವೆಯೂ ಯಡಿಯೂರಪ್ಪ ಬಜೆಟ್ ಮಂಡನೆ ಮುಂದುವರೆಸಿದರು.

 ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸುವ ನೈತಿಕತೆಯಿಲ್ಲ: ಕಾಂಗ್ರೆಸ್ ಸಭಾತ್ಯಾಗಕ್ಕೆ ನಿರ್ಧಾರ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಸಿದ್ದರಾಮಯ್ಯ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು. ಕಾಂಗ್ರೆಸ್ ಸಭಾತ್ಯಾಗದ ವಿರುದ್ಧ ಬಿಜೆಪಿ ಸದಸ್ಯರು ಸದನದಲ್ಲಿ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...