ಬೆಂಗಳೂರು: ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿದ್ದು, ಕಾಲೇಜು ಆರಂಭದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಸೋಂಕು ಕಾಣಿಸಿಕೊಂಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 16ರಿಂದ ನ.19ರವರೆಗೆ 13,037 ಜನ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು, ಈ ಪೈಕಿ 89 ಜನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.
ಶಾಲಾ-ಕಾಲೇಜು ಆರಂಭವಾದ ಬಳಿಕ ಕೋವಿಡ್ ಸಂಖ್ಯೆ ಹೆಚ್ಚಿದ ಬೆನ್ನಲ್ಲೇ ಈಗಾಗಲೇ ಹರಿಯಾಣ ಸರ್ಕಾರ ಮತ್ತೆ ಶಾಲಾ-ಕಾಲೇಜು ಬಂದ್ ಮಾಡಿದೆ. ಇನ್ನು ಗುಜರಾತ್ ಸರ್ಕಾರ ಕಾಲೇಜು ಆರಂಭದ ದಿನಾಂಕ ಮುಂದೂಡಿದೆ.