ಬೆಂಗಳೂರು: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಪೊಲೀಸ್ ಇಲಾಖೆಯೇ ತತ್ತರಿಸಿದ್ದು, ರಾಜಧಾನಿ ಬೆಂಗಳೂರಿನ ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ ಮೂವರು ಪೊಲೀಸರು ಬಲಿಯಾಗಿದ್ದು, 193 ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ 193 ಪೊಲೀಸ್ ಸಿಬ್ಬಂದಿ ಹೋಂ ಕ್ವಾರಂಟೈನ್ ಆಗಿದ್ದಾರೆ. ಇನ್ನು 10 ಪೊಲೀಸರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ದಂಡದಿಂದ ತಪ್ಪಿಸಿಕೊಳ್ಳಲು ರೈಲಿನ ಕಿಟಕಿಯಿಂದ ಹಾರಿದ ಟಿಕೆಟ್ ರಹಿತ ಪ್ರಯಾಣಿಕ…!
ಕೊರೊನಾ ಸೋಂಕು ಪೊಲೀಸ್ ಸಿಬ್ಬಂದಿಗಳಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿರ್ದೇಶನದ ಮೇರೆಗೆ ಆಯುಕ್ತರ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲು ನಿರ್ಧರಿಸಲಾಗಿದೆ. ಈ ಮೂಲಕ ಇಲಾಖೆ ಸಿಬ್ಬಂದಿಗಳಲ್ಲಿ ಸೋಂಕು ಕಂಡುಬಂದರೆ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.