alex Certify BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿಯಾದ ಮಧು ಬಂಗಾರಪ್ಪ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿಯಾದ ಮಧು ಬಂಗಾರಪ್ಪ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ

ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ನಿರ್ಧರಿಸಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಧು ಬಂಗಾರಪ್ಪ ನಿನ್ನೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಭೇಟಿ ಬಳಿಕ ಮಾತನಾಡಿದ್ದ ಮಧು ಬಂಗಾರಪ್ಪ, ಏಪ್ರಿಲ್ ನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ. ನನ್ನ ಭಾವನೆಗೆ ಕಾಂಗ್ರೆಸ್ ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದ್ದರು.

ಕಚೇರಿಯಲ್ಲೇ ಹೊಡೆದಾಡಿಕೊಂಡ ಬಿಬಿಎಂಪಿ ಅಧಿಕಾರಿ ಹಾಗೂ ಗುತ್ತಿಗೆದಾರರು

ಇದರ ಬೆನ್ನಲ್ಲೇ ಇದೀಗ ಮಧು ಬಂಗಾರಪ್ಪ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ, ಕಾಂಗ್ರೆಸ್ ಸೇರ್ಪಡೆ ಸಂಬಂಧ ಸಮಾಲೋಚನೆ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...