ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಖಾಸಗಿ ಶಾಲೆಗಳ ಶುಲ್ಕ ವಸೂಲಿ ಕ್ರಮಕ್ಕೆ ಬ್ರೇಕ್ ಹಾಕಿದ್ದು, ಎಲ್ಲಾ ಮಾದರಿಯ ಖಾಸಗಿ ಶಾಲೆಗಳು ಬೋಧನಾ ಶುಲ್ಕ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೊರೊನಾದಿಂದಾಗಿ ಎಲ್ಲಾ ಕ್ಷೇತ್ರಗಳೂ ಆರ್ಥಿಕ ಸಂಕಷ್ಟಕ್ಕೀಡಾಗಿವೆ. ಪೋಷಕರು ಶುಲ್ಕ ನೀಡಲಾಗದ ಸ್ಥಿತಿಯಲ್ಲಿದ್ದಾರೆ. ಇತ್ತ ಶುಲ್ಕ ನೀಡದಿದ್ದರೆ ಶಾಲೆಗಳು ಶಿಕ್ಷಕರಿಗೆ ವೇತನ ನೀಡಲಾಗದ ಸ್ಥಿತಿಯಿದೆ. ಹೀಗಾಗಿ ಖಾಸಗಿ ಶಾಲೆಗಳು 2019ರ ಬೋಧನಾ ಶುಲ್ಕದ ಶೇ.70 ರಷ್ಟು ಮಾತ್ರ ಪಡೆಯಬೇಕು ಎಂದರು.
ಯಾವುದೇ ಶಾಲೆಗಳು ಅಭಿವೃದ್ಧಿ, ಟ್ರಸ್ಟ್ ಗಳ ಅಭಿವೃದ್ಧಿ ಹೆಸರಲ್ಲಿ ಶುಲ್ಕ ಪಡೆಯುವಂತಿಲ್ಲ. ಒಂದು ವೇಳೆ ಈಗಾಗಲೇ ಹೆಚ್ಚಿನ ಶುಲ್ಕ ಪಡೆದಿದ್ದರೆ ಅದನ್ನು ಮುಂದಿನ ವರ್ಷಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಕು. ಮೂರು ಕಂತುಗಳಲ್ಲೂ ಶುಲ್ಕ ಪಾವತಿ ಮಾಡಬಹುದು ಎಂದು ತಿಳಿಸಿದರು.