ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮಿರುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ 23 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಈ ನಡುವೆ ಜೂನ್ ವೇಳೆಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 33 ಲಕ್ಷಕ್ಕೆ ತಲುಪಲಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಐಐಎಸ್ ಸಿ ಬಹಿರಂಗಪಡಿಸಿದೆ.
ಈಗಾಗಲೇ ಬೆಂಗಳೂರಿನಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ವ್ಯವಸ್ಥೆ ಸಿಗುತ್ತಿಲ್ಲ. ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸನ್ನಿವೇಶದಲ್ಲಿ ಐ ಐ ಎಸ್ ಸಿ ನೀಡಿರುವ ಮಾಹಿತಿ ಸರ್ಕಾರಕ್ಕೂ ಆಘಾತ ತಂದಿದೆ.
ಗರ್ಭಿಣಿಯರಿಗೆ ಕೋವಿಡ್ -19 ಮಾರ್ಗಸೂಚಿ
ಪ್ರಸ್ತುತ ಬೆಂಗಳೂರಿನಲ್ಲಿ ಇರುವ ಕೊರೊನಾ ಸೋಂಕಿತರ ಅಂಕಿ-ಅಂಶಗಳನ್ನು ಆಧರಿಸಿ ಐ ಐ ಎಸ್ ಸಿ ಈ ವರದಿ ನೀಡಿದ್ದು, ಜೂನ್ ವೇಳೆಗೆ ಬೆಂಗಳೂರಿನಲ್ಲಿ 33 ಲಕ್ಷ ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಲಿವೆ. ಅಲ್ಲದೇ ಸಾವಿನ ಸಂಖ್ಯೆ 24,000ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕಠಿಣ ಲಾಕ್ ಡೌನ್ ಕ್ರಮಗಳನ್ನು ಅನುಸರಿಸುವ ಅಗತ್ಯವಿದೆ ಎಂದು ಸಲಹೆ ನೀಡಿದೆ.