ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದ್ದು, ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಅಣ್ಣಮ್ಮ ದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಕಡಿಮೆಯಾಗಬೇಕು ಎಂದು ಅಣ್ಣಮ್ಮ ದೇವರ ದರ್ಶನ ಪಡೆದು ಪ್ರಾರ್ಥಿಸಿದ್ದೇನೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜನತಾ ಕರ್ಫ್ಯೂ ಸರಿಯಾಗಿ ಪಾಲನೆಯಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಗಳು ಅನಿವಾರ್ಯವಾಗಬಹುದು ಎಂದರು.
ಜೀವ ರಕ್ಷಕ ಹೊತ್ತು ತರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಭೀಕರ ಅಪಘಾತ
ಇಂದು ಅಥವಾ ನಾಳೆ ಈ ನಿಟ್ಟಿನಲ್ಲಿ ಮಹತ್ವದ ಸಭೆ ನಡೆಸಿ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರುವ ಬಗ್ಗೆ ನಿರ್ಧರಿಸಲಾಗುವುದು ಎಂದರು. ಈ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಅನಿವಾರ್ಯ ಎಂಬ ಸುಳಿವು ನೀಡಿದ್ದಾರೆ.
ಇನ್ನು ಆಸ್ಪತ್ರೆಗಳಲ್ಲಿ ಬೆಡ್ ಸಿಗಲ್ಲವೆಂದು ವಿಧಾನಸೌಧ, ಸಿಎಂ ಮನೆ ಮುಂದೆ ಬಂದು ಧರಣಿ ನಡೆಸುವುದು ಸರಿಯಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಬೆಡ್ ವ್ಯವಸ್ಥೆ ಸರಿಯಾಗಿ ಆಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.