ಬಾಗಲಕೋಟೆ: ತೋಟಗಾರಿಕಾ ವಿಶ್ವ ವಿದ್ಯಾಲಯದ 20 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆಫ್ ಲೈನ್ ತರಗತಿಗಳನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎಂ.ಇಂದಿರೇಶ್ ಮಾಹಿತಿ ನೀಡಿದ್ದು, ತೋಟಗಾರಿಕಾ ವಿವಿ ವ್ಯಾಪ್ತಿಯ ವಿವಿಧ ವಿಶ್ವವಿದ್ಯಾಲಯಗಳ 20 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ಏಪ್ರಿಲ್ 20ರವರೆಗೆ ವಿವಿ ಆಫ್ ಲೈನ್ ತರಗತಿಗಳು ಬಂದ್ ಆಗಿದ್ದು, ಆನ್ ಲೈನ್ ತರಗತಿಗಳು ನಡೆಯಲಿವೆ ಎಂದು ಹೇಳಿದ್ದಾರೆ.
ಕೊರೊನಾ ಲಸಿಕೆ ಹಾಕಿಸಿಕೊಂಡವರ ಎಫ್ಡಿ ಮೇಲೆ ಹೆಚ್ಚಿನ ಬಡ್ಡಿ ನೀಡ್ತಿದೆ ಈ ಬ್ಯಾಂಕ್..!
ಬಾಗಲಕೋಟೆ, ಬೀದರ್, ಶಿರಸಿ, ಬೆಂಗಳೂರಿನ ತೋಟಗಾರಿಕಾ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಕುಲಪತಿಗಳು ತಿಳಿಸಿದ್ದಾರೆ.