ಬೆಂಗಳೂರು: ಕೊರೊನಾ ಎರಡನೇ ಅಲೆ ಅಟ್ಟಹಾಸದ ಬೆನ್ನಲ್ಲೇ ಇದೀಗ 3ನೇ ಅಲೆ ಆತಂಕ ಎದುರಾಗಿದ್ದು, ಮಕ್ಕಳಲ್ಲಿ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಸರ್ಕಾರದಿಂದ ಪೂರ್ವ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.
ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ಚಿಕಿತ್ಸೆಗೆ ಸಿದ್ಧತೆ ನಡೆಸಿರುವ ಬಿಬಿಎಂಪಿ, ಬೆಂಗಳೂರಿನಲ್ಲಿ ಮಕ್ಕಳ ಆಸ್ಪತ್ರೆ, ಐಸಿಯು ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಂಡಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಮೂರನೇ ಅಲೆಯಲ್ಲಿ ಮಕ್ಕಳಿಗೆ ಮಾರಕ ಎಂದು ಈಗಾಗಲೇ ವೈದ್ಯರು ಎಚ್ಚರಿಸಿದ್ದಾರೆ. ಈ ನಿಟ್ಟಿನಲ್ಲಿ ಮಕ್ಕಳ ಆಸ್ಪತ್ರೆ, ಐಸಿಯು ಬೆಡ್, ಮಕ್ಕಳ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ. ಪ್ರತಿ ಆಸ್ಪತ್ರೆಯಲ್ಲಿಯೂ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುವುದು ಎಂದು ಹೇಳಿದರು.