alex Certify BIG NEWS; ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ಸೇರಿ 31 ಸಿಬ್ಬಂದಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS; ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ಸೇರಿ 31 ಸಿಬ್ಬಂದಿಗೆ ಕೊರೊನಾ ಸೋಂಕು

ಮಡಿಕೇರಿ: ಕೋವಿಡ್ ಆಸ್ಪತ್ರೆಗಳಲ್ಲಿ ಕೊರೊನಾ ಅಟ್ಟಹಾಸಕ್ಕೆ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಕೂಡ ತುತ್ತಾಗುತ್ತಿದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಯ 8 ವೈದ್ಯರು, ನರ್ಸ್ ಗಳು, ವೈದ್ಯಕೀಯ ಸಿಬ್ಬಂದಿಗಳು ಸೇರಿ ಬರೋಬ್ಬರಿ 31 ಸಿಬ್ಬಂದಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿರುವ ಘಟನೆ ಮಡಿಕೇರಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 123 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಅವರಲ್ಲಿ 8 ವೈದ್ಯರು, ಮೆಡಿಕಲ್ ಆಫಿಸರ್ಸ್, ನರ್ಸ್, ಡಿ ಗ್ರೂಪ್ ನೌಕರರು ಸೇರಿ 31 ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ 14 ದಿನಗಳ ಹೋಂ ಕ್ವಾರಂಟೈನ್ ಗೆ ಸೂಚಿಸಲಾಗಿದೆ ಎಂದು ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಲೋಕೇಶ್ ತಿಳಿಸಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ವೃದ್ದೆ: ಕೋವಿಡ್​ ಕುರಿತ ಅಧ್ಯಯನಕ್ಕಾಗಿ ಶವ ದಾನ

ಪ್ರತಿದಿನ ಜಿಲ್ಲೆಯಲ್ಲಿ ನೂರಾರು ಪಾಸಿಟಿವ್ ಕೇಸ್ ಗಳು ದಾಖಲಾಗುತ್ತಿದ್ದು, ಇದೀಗ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ 10 ದಿನಗಳ ಕಾಲ ಲಾಕ್ ಡೌನ್ ಗೆ ನಿರ್ಧರಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...