alex Certify BIG NEWS: ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ – ಮತ್ತಷ್ಟು ನಗರಗಳಿಗೂ ವಿಸ್ತರಣೆಯಾಗಲಿದೆ ಕರ್ಫ್ಯೂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ – ಮತ್ತಷ್ಟು ನಗರಗಳಿಗೂ ವಿಸ್ತರಣೆಯಾಗಲಿದೆ ಕರ್ಫ್ಯೂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಬಗ್ಗೆ ಜನರಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಯಡಿಯೂರಪ್ಪ ಲಾಕ್ ಡೌನ್ ಜಾರಿ ಪ್ರಸ್ತಾಪವಿಲ್ಲ ಆದರೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ. 8 ಜಿಲ್ಲೆಗಳಲ್ಲಿ ಏಪ್ರಿಲ್ 20ರವರೆಗೆ ನೈಟ್ ಕರ್ಫ್ಯೂ ಕೂಡ ಜಾರಿಯಲ್ಲಿದೆ. ಸೋಂಕು ಹೆಚ್ಚುತ್ತಿರುವ ಇನ್ನೂ ಕೆಲ ಜಿಲ್ಲೆಗಳಿಗೂ ನೈಟ್ ಕರ್ಫ್ಯೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕೊರೊನಾ ಎರಡನೇ ಅಲೆ ಅಬ್ಬರ: ಬ್ಯಾಂಕ್ ಗಳಿಗೆ ಶುರುವಾಯ್ತು ಭಯ – ಸಾಲಗಾರರಿಗೆ ಮತ್ತೆ ಸಿಗುತ್ತಾ ರಿಲೀಫ್…?

ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಈ ವೇಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿಯನ್ನು ಚರ್ಚಿಸಲಾಗುವುದು. ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆಯೂ ನಿರ್ಧರಿಸಲಾಗುವುದು. ಒಟ್ಟಾರೆ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಭೆಯಲ್ಲಿ ತೀರ್ಮಾನಿಸುವುದಾಗಿ ತಿಳಿಸಿದರು.

ಈ ಮೂಲಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಲ್ಲ ಎಂಬುದು ಸ್ಪಷ್ಟ. ಆದರೆ ಕೊರೊನಾ ಕರ್ಫ್ಯೂ ಹೆಸರಲ್ಲಿ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಏಪ್ರಿಲ್ 22ರವರೆಗೆ ಇನ್ನೂ ಹಲವು ಜಿಲ್ಲೆಗಳಿಗೆ ವಿಸ್ತರಣೆಯಾಗುವುದು ಬಹುತೇಕ ಖಚಿತ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...