
ಕಲಬುರ್ಗಿ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಹಾರಾಷ್ಟ್ರದ ಸೊಲ್ಲಾಪುರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಲಬುರ್ಗಿ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈ ವೇಳೆ ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ ಪತ್ನಿ ಜಯಶ್ರೀ ಅವರ ಹೆಸರಿನಲ್ಲಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಅತುಲ್ ಸಿರಶೆಟ್ಟಿ, ಪ್ರದೀಪ್ ಕಾರಂಜೆ ಎಂದು ಗುರುತಿಸಲಾಗಿದೆ. ಬಂಧಿತರಿಂದ 38.44 ಲಕ್ಷ ನಗದು, ಎರಡು ಕಾರು, ಒಂದು ಬೈಕ್, ನಾಲ್ಕು ಲ್ಯಾಪ್ ಟಾಪ್, ಟಿವಿಗಳನ್ನು ವಶಕ್ಕೆ ಪಡೆಯಲಾಗಿದೆ.