ಮೈಸೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಮೈಸೂರಿನ ಕುವೆಂಪು ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದು, ಐವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ನವೀನ್, ಶಿವರಾಜು, ಹರೀಶ್, ವಿಜಿ ಹಾಗೂ ಹುಣಸೂರಿನ ಯುವತಿ ಅನಿತಾ ಎಂದು ಗುರುತಿಸಲಾಗಿದೆ. ಆರೋಪಿಗಳು ಪಿರಿಯಾಪಟ್ಟಣದಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದರು.
ಹನಿಟ್ರ್ಯಾಪ್ ಗೆ ಒಳಗಾಗಿದ್ದ ಡಾ. ಪ್ರಕಾಶ್ ಬಾಬು ಎಂಬುವವರಿಗೆ 1 ಕೋಟಿ ರೂ ಹಣದ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದರೆ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿದ್ದರು. ಈ ಹಿನ್ನೆಲೆಯಲ್ಲಿ ಡಾ.ಪ್ರಕಾಶ್ ಮೈಸೂರು ಕುವೆಂಪು ನಗರ ಠಾಣೆಗೆ ದೂರು ನೀಡಿದ್ದರು. ಪ್ರಕಾಶ್ ದೂರಿನ ಆಧಾರದ ಮೇಲೆ ದಾಳಿ ನಡೆಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.