alex Certify BIG NEWS: ಗೋಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ – ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ – ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಗರಂ

ಇಂದು ಸುದ್ದಿಘೋಷ್ಠಿ ನಡೆಸಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ – Nairutyanews

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮಸೂದೆಗೆ ರಾಷ್ಟ್ರಪತಿಗಳು ಒಪ್ಪಿಗೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.

ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮೂಲಕ ರಾಜ್ಯ ಸರ್ಕಾರ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡಲು ಹೊರಟಿದೆ. 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿತ್ತು. ಅಂದು ಕೂಡ ಜೆಡಿಎಸ್ ವಿರೋಧ ವ್ಯಕ್ತಪಡಿಸಿತ್ತು. ಈಗಲೂ ಕೂಡ ಮಸೂದೆ ಮಂಡನೆಗೆ ಜೆಡಿಎಸ್ ಬೆಂಬಲ ನೀಡಲ್ಲ ಎಂದು ಹೇಳಿದರು.

ಅಂದು ಮಸೂದೆ ಮಂಡನೆಗೆ ಹೊರಟಾಗ ನಾವು ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದೆವು. ಬಳಿಕ ಮಸೂದೆ ಹಿಂಪಡೆಯಲಾಗಿತ್ತು. ಆದರೆ ಈಗ ಸರ್ಕಾರ ಮತ್ತೆ ಗೋಹತ್ಯೆ ನಿಷೇಧ ಮಸೂದೆ ಮಂಡನೆಗೆ ಮುಂದಾಗಿರುವುದು ಸರಿಯಲ್ಲ. ಜೆಡಿಎಸ್ ವಿರೋಧವಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...