alex Certify BIG NEWS: ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸಿದ ಕೊರೊನಾ ಕಬಂದಬಾಹು; ಹಳ್ಳಿ ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸಿದ ಕೊರೊನಾ ಕಬಂದಬಾಹು; ಹಳ್ಳಿ ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ…!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಈ ನಡುವೆ ಗ್ರಾಮೀಣ ಪ್ರದೇಶ, ಹಳ್ಳಿ ಹಳ್ಳಿಗಳಿಗೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಈಗಿನ ಶೇಕಡಾ 55ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ತಿಂಗಳ ಹಿಂದೆ ಈ ಪ್ರಮಾಣ ಶೇಕಡಾ 30 ರಷ್ಟಿತ್ತು. ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನ ಹರಿಸಬೇಕು. ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸರಿಸಲಾಗಿದ್ದ ಸುರಕ್ಷತಾ ಕ್ರಮಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಕೂಡಾ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಉಲ್ಭಣಗೊಳ್ಳಲು ಕಾರಣ. ಕಳೆದೆರಡು ತಿಂಗಳಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳಿದ್ದ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಜನ ಯಾವುದೇ ತಪಾಸಣೆಯಿಲ್ಲದೆ ಹಳ್ಳಿಗಳಿಗೆ ಬರುತ್ತಿದ್ದಾರೆ. ಬೆಂಗಳೂರಿನ ಸ್ಥಿತಿ ಬಿಗಡಾಯಿಸಿದ ನಂತರ ಅಲ್ಲಿಂದಲೂ ಜನ ಹಿಂಡುಗಟ್ಟಿಕೊಂಡು ಜಿಲ್ಲೆಗಳಿಗೆ ತೆರಳಿದ್ದಾರೆ. ಅಂತರರಾಜ್ಯ ಮಾತ್ರವಲ್ಲ ಅಂತರಜಿಲ್ಲಾ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Potraviny, které Jak se Neuvěřitelný trik, o kterém Jak se zbavit čajových usazenin na Jak se zbavit zápachu Jak snížit hladinu cukru