ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದರೂ ಗ್ರಾಮೀಣ ಭಾಗಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹಾಗಾಗಿ ಹಳ್ಳಿ, ಹಳ್ಳಿಗಳಲ್ಲೂ ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳಲ್ಲಿ ಸಮಿತಿ ರಚಿಸಲು ನಿರ್ಧರಿಸಿದೆ.
BCCI ನಿಂದ 2000 ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಿ ಸಮಿತಿ ರಚಿಸಲಾಗುತ್ತಿದೆ. ಸಮಿತಿಯಲ್ಲಿ ಪೊಲೀಸರು, ಅಧಿಕಾರಿಗಳು ಇರುತ್ತಾರೆ. ಇವರು ಜನರ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕುವುದರ ಜೊತೆಗೆ ಸೋಂಕಿತರಿಗೆ ಔಷಧ ವಿತರಣೆಯನ್ನೂ ಮಾಡಲಿದ್ದಾರೆ ಎಂದರು.
ಪುಣೆಯಲ್ಲಿ ಬ್ಲಾಕ್ ಫಂಗಸ್ ಸ್ಫೋಟ; 574 ಜನರಲ್ಲಿ ಕಪ್ಪು ಶಿಲೀಂದ್ರ ಸೋಂಕು
ಕೊರೊನಾ ಎರಡನೇ ಅಲೆಯಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ಕೋವಿಡ್ ಬಂದ ಎರಡು-ಮೂರು ದಿನಗಳಲ್ಲಿ ಆಕ್ಸಿಜನ್ ಲೆವಲ್ ಕಡಿಮೆಯಾಗುತ್ತಿದೆ. ಹೀಗಾಗಿ ಉಸಿರಾಟ, ನ್ಯುಮೋನಿಯಾದಂತಹ ಸಮಸ್ಯೆಯಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದರು.