ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸರಣಿ ಸಾವು ಮುಂದುವರೆದಿದ್ದು, ದಿನದಿಂದ ದಿನಕ್ಕೆ ಆತಂಕವನ್ನು ಹೆಚ್ಚಿಸಿದೆ. 24 ಗಂಟೆಯಲ್ಲಿ ಮತ್ತೆ 8 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 8 ರೋಗಿಗಳು ಸಾವನ್ನಪ್ಪಿದ್ದು, ಅವರಲ್ಲಿ 6 ಜನರು ಕೊರೊನಾ ಸೋಂಕಿತರಾಗಿದ್ದಾರೆ. ಇಬ್ಬರು ನಾನ್ ಕೋವಿಡ್ ರೋಗಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಸಧ್ಯಕ್ಕೆ ಆಕ್ಸಿಜನ್ ಕೊರತೆಯಿಲ್ಲ. ಸೋಂಕಿತರಿಗೆ ಬೆಡ್ ವ್ಯವಸ್ಥೆ, ಚಿಕಿತ್ಸೆ ಬಗ್ಗೆಯೂ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಅಟ್ಟಹಾಸ – ಬೆಂಗಳೂರಿನ ಬಗ್ಗೆ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಐಐಎಸ್ ಸಿ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಆಕ್ಸಿಜನ್ ಕೊರತೆಯಿಂದ 24 ಗಂಟೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಎರಡು ದಿನದ ಹಿಂದೆ ಮತ್ತೆ 10 ರೋಗಿಗಳು ಸಾವನ್ನಪ್ಪಿದ್ದರು. ಇದೀಗ ಒಂದೇ ದಿನದಲ್ಲಿ ಮತ್ತೆ 8 ರೋಗಿಗಳು ಸಾವನ್ನಪ್ಪಿದ್ದು, ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು ಮುಂದುವರೆದಿದೆ.