ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರು 24 ಜನರಲ್ಲ ಬದಲಾಗಿ 36 ಜನರು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಸಮಿತಿ ಇದೀಗ ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದು, ವರದಿಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ.
ಹೆಚ್ಚಾಗ್ತಿರುವ ಕೊರೊನಾ: ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆ ಮುಂದೂಡಿಕೆ
ಜಿಲ್ಲಾಸ್ಪತ್ರೆಯಲ್ಲಿ ಮೇ 2ರಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 2:30 ರವರೆಗೆ ಆಕ್ಸಿಜನ್ ಇರಲಿಲ್ಲ. ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ 36 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಸಮಿತಿ ತಿಳಿಸಿದೆ.
ಆಸ್ಪತ್ರೆಯ ಆಡಿಟ್ ವರದಿಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದು, 7 ಜನರು ಮೆದುಳಿಗೆ ರಕ್ತ ಸಂಚಾರವಾಗದೇ ಸಾವನ್ನಪ್ಪಿದ್ದರೆ 3 ಸೋಂಕಿತರು ಮಾತ್ರ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ 14 ರೋಗಿಗಳು ಕೋವಿಡ್ ಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿತ್ತು. ಇದೀಗ ಆಡಿಟ್ ವರದಿ ಅಲ್ಲಗಳೆದಿರುವ ಸಮಿತಿ, ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಯಲ್ಲಿ 36 ರೋಗಿಗಳು ಆಕ್ಸಿಜನ್ ಕೊರತೆಯಿಂದಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.