ಬೆಳಗಾವಿ: ಗಡಿ ವಿಚಾರವಾಗಿ ಕ್ಯಾತೆ ತೆಗೆಯುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇತಿಹಾಸವೇ ಗೊತ್ತಿಲ್ಲ. ಛತ್ರಪತಿ ಶಿವಾಜಿ ಮಹಾರಾಜರ ಮೂಲದ ಬಗ್ಗೆ ಮೊದಲು ತಿಳಿದುಕೊಳ್ಳಲಿ ಎಂದು ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾರಜೋಳ, ಶಿವಾಜಿ ಮಹಾರಾಜರ ಪುರ್ವಜರು ಕರ್ನಾಟಕದವರು. ಶಿವಾಜಿಯವರ ಪೂರ್ವಜ ಬೆಳ್ಳಿಯಪ್ಪ ಗದಗ ಜಿಲ್ಲೆ ಸೊರಟೂರಿನವರು. ಬರ ಬಂದ ಕಾರಣ ಮಹಾರಾಷ್ಟ್ರಕ್ಕೆ ಗುಳೆ ಹೋಗಿ ನೆಲೆಸಿದರು. ಅವರ ನಾಲ್ಕನೇ ತಲೆಮಾರಿನವರೇ ಶಿವಾಜಿ ಮಹಾರಾಜರು. ಮೊದಲು ಉದ್ಧವ್ ಠಾಕ್ರೆ ಇತಿಹಾಸ ತಿಳಿದುಕೊಳ್ಳಲಿ ಎಂದರು.
ವಿಕ್ಟೋರಿಯಾ ಆಸ್ಪತ್ರೆಯಿಂದ ಶಶಿಕಲಾ ನಟರಾಜನ್ ಡಿಸ್ಚಾರ್ಜ್
ಮರಾಠಿಗರು ಹಾಗೂ ಕನ್ನಡಿಗರು ಸಹೋದರರಂತೆ ಬದುಕುತ್ತಿದ್ದಾರೆ. ಕಾಂಗ್ರೆಸ್ ನವರು ಕುರ್ಚಿ ಕಸಿದುಕೊಳ್ಳುತ್ತಾರೆ ಎಂಬ ಭಯ ಠಾಕ್ರೆಗೆ ಕಾಡುತ್ತಿದೆ. ಹಾಗಾಗಿ ತಮ್ಮ ಖುರ್ಚಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜನರ ಮನಸ್ಸು ಬೇರೆಡೆ ಸೆಳೆಯಲು ಗಡಿ ವಿಚಾರವೆತ್ತಿ ಇಂತಹ ಗೊಂದಲ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.