ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗುತ್ತಿದ್ದು, ಪ್ರತಿ ತಿಂಗಳ 3ನೇ ಶನಿವಾರದಂದು ಇದನ್ನು ನಡೆಸಿಕೊಂಡು ಹೋಗಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.
ಗ್ರಾಮೀಣ ಪ್ರದೇಶದ ಜನತೆ ತಮ್ಮ ಕೆಲಸ ಕಾರ್ಯಗಳಿಗಾಗಿ ನಗರ ಪ್ರದೇಶದಲ್ಲಿರುವ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಇದರನ್ವಯ ಜಿಲ್ಲಾಧಿಕಾರಿಗಳು ಹಳ್ಳಿಗಳಿಗೆ ತೆರಳಿ ಗ್ರಾಮೀಣ ಜನತೆಯ ಅಹವಾಲು ಆಲಿಸಲಿದ್ದಾರೆ.
ಆಧಾರ್ ಹೊಂದಿದ ರೈತರಿಗೆ ಮುಖ್ಯ ಮಾಹಿತಿ: ರೈತರ ಜಮೀನು ಗುರುತು ಸಂಖ್ಯೆ ಕಡ್ಡಾಯ
ಕಂದಾಯ ಸಚಿವ ಆರ್. ಅಶೋಕ್ ಇಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಬಳಿಕ ಪ್ರತಿ ತಿಂಗಳ ಮೂರನೇ ಶನಿವಾರ ಈ ಕಾರ್ಯಕ್ರಮ ಮುಂದುವರಿದುಕೊಂಡು ಬರಲಿದೆ.