ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಯಲ್ಲಿರುವ ಲಾಕ್ ಡೌನ್ ವಿಸ್ತರಣೆ ಕುರಿತು ಸ್ಪಷ್ಟನೆ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸುವುದಾಗಿ ತಿಳಿಸಿದ್ದಾರೆ.
ಧೋನಿ ವಿಡಿಯೋಕ್ಕೆ ಸಿಕ್ತು ಸಿಕ್ಕಾಪಟ್ಟೆ ರೆಸ್ಪಾನ್ಸ್: ಪ್ರತಿಕ್ರಿಯೆ ನೀಡಿದ ಬಿಪಾಷಾ ಬಸು
5 ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಹಲವು ಸಲಹೆಗಳನ್ನು ನೀಡಲಾಗಿದೆ. ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಬಾಬಾ ರಾಮದೇವ್ ಜೊತೆ ಬಹಿರಂಗ ಚರ್ಚೆಗೆ IMA ರೆಡಿ
ಸಧ್ಯ ಜಾರಿಯಲ್ಲಿರುವ ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆ ಇಲ್ಲ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ 7ರವರೆಗೆ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು. ಬಹುಶಃ ಜೂನ್ 7ರ ನಂತರ ಲಾಕ್ ಡೌನ್ ಅಗತ್ಯವಿರುವುದಿಲ್ಲ. ಸೋಂಕು ನಿಯಂತ್ರಣಕ್ಕೆ ಜನರು ಸಹಕಾರ ನೀಡಬೇಕು ಎಂದು ಹೇಳಿದರು.